ಡಿಪ್ಲೊಮಾ ಕೋಸ್೯ಗಳ ಉಳಿಕೆ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನ: ಸೆಪ್ಟೆಂಬರ್ 10 ಕೊನೆ ದಿನ

0
41
Share this Article
0
(0)
Views: 4

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 04

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ. ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ನಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಿಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳಿಗೆ ಈ ಕೋರ್ಸ್ ಗಳಿಗೆ ಎಸ್. ಎಸ್. ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ. ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ತರಬೇತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ. ಈ ಡಿಪ್ಲೋಮಾ ಕೋರ್ಸ್ಗಳ ಅವಧಿ 3+1. ಈ ಕೋರ್ಸ್ ಗಳು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದ್ದಾಗಿದ್ದು, ಶೇ. 30% ಥಿಯರಿ, ಶೇ. 70% ಪ್ರಾಕ್ಟಿಕಲ್ ಹೊಂದಿರುವ ಕೋರ್ಸ್ ಗಳಾಗಿವೆ. ಈ ಕೋರ್ಸ್ ಅಧ್ಯಯನ ಮಾಡುವಾಗ 3 ವರ್ಷ ಡಿಪ್ಲೊಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್ ಶಿಪ್ ತರಬೇತಿ ನೀಡಲಾಗುತ್ತದೆ. ಈ ಇಂಟರ್ನ್ ಶಿಪ್ ತರಬೇತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 20,000 ವರೆಗೆ ಶಿಷ್ಯ ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ 080-26607666, 9036144417, 9242952017, 9980956425 ಅಥವಾ ಜಿಟಿಟಿಸಿ ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕಾಲೇಜಿಗೆ ಭೇಟಿ ನೀಡಬಹುದು ಎಂದು ದೇವನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.